HomeKarnatakaBIG NEWS: 'ಬಯೋಮೆಟ್ರಿಕ್' ಮೂಲಕ ಹಾಜರಾತಿ ದಾಖಲಿಸದವರಿಗೆ ಬಿಗ್ ಶಾಕ್; ವೇತನ ತಡೆ ಹಿಡಿಯಲು ಸೂಚನೆ

BIG NEWS: ‘ಬಯೋಮೆಟ್ರಿಕ್’ ಮೂಲಕ ಹಾಜರಾತಿ ದಾಖಲಿಸದವರಿಗೆ ಬಿಗ್ ಶಾಕ್; ವೇತನ ತಡೆ ಹಿಡಿಯಲು ಸೂಚನೆ

ಬೆಂಗಳೂರು: ಬಯೋಮೆಟ್ರಿಕ್ ಮೂಲಕ ಹಾಜರಾತಿ ದಾಖಲಿಸದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆ ಮೂಲಕ ಹಾಜರಾತಿ ದಾಖಲಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು ತಡೆಹಿಡಿಯಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಆರೋಗ್ಯ ಇಲಾಖೆಯಡಿಯ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳು ಹಾಗೂ ತರಬೇತಿ ಕೇಂದ್ರಗಳಲ್ಲಿ ಎಇಬಿಎ ಎಸ್ ವ್ಯವಸ್ಥೆಯ ಮೂಲಕ ಹಾಜರಾತಿ ದಾಖಲಿಸಲು ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸೂಚಿಸಲಾಗಿತ್ತು. ಈ ಹಾಜರಾತಿಯನ್ನು ಪರಿಶೀಲಿಸಿ ವೇತನ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ಜಿಲ್ಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪ್ರಮಾಣ ತೃಪ್ತಿಕರವಾಗಿಲ್ಲ ಆದ್ದರಿಂದ ಈ ವ್ಯವಸ್ಥೆಯಡಿ ಹಾಜರಾತಿ ದಾಖಲಿಸದವರಿಗೆ ವೇತನ ತಡೆ ಹಿಡಿಯಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular