HomeKarnatakaರಾಜ್ಯ ಸರ್ಕಾರದಿಂದ `KSRTC' ಸಿಬ್ಬಂದಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಹೃದಯ ಸಂಬಂಧಿ ವೈದ್ಯಕೀಯ...

ರಾಜ್ಯ ಸರ್ಕಾರದಿಂದ `KSRTC’ ಸಿಬ್ಬಂದಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ, ಚಿಕಿತ್ಸೆ ಉಚಿತ

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ನಿರ್ಧರಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಸಿಬ್ಬಂದಿಗೆ 10 ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಸಂಬಂಧ 5 ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ  40 ವರ್ಷಕ್ಕಿಂತ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ಕಾಲಕಾಲಕ್ಕೆ ತಪಾಸಣೆಗೊಳಪಡಿಸಲಾಗುವುದು. ಕಾಯಿಲೆ ಕಂಡು ಬಂದರೆ ಅದಕ್ಕೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular