HomeKarnatakaBIGG NEWS : ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ : ಕೆ.ಎಸ್.ಈಶ್ವರಪ್ಪ ಮಹತ್ವದ ಹೇಳಿಕೆ!

BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ : ಕೆ.ಎಸ್.ಈಶ್ವರಪ್ಪ ಮಹತ್ವದ ಹೇಳಿಕೆ!

ಮೈಸೂರು :  ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಮಾಜಿ ಸಚಿವ ಕೆ.ಎಸ್.  ಈಶ್ವರಪ್ಪ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ ಬೆಂಬಲ ನೀಡಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಇಲ್ಲ.  ಲೋಕದಭೆ ಚುನಾವಣೆಯಲ್ಲಿ ಮಾತ್ರ ಮೈತ್ರಿ ಮಾಡಲಾಗುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಒಮ್ಮೆಯೂ ಗೆದ್ದಿಲ್ಲ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ 12 ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಜೆಡಿಎಸ್ ಗೆ ಬೆಂಬಲ ನೀಡುವ ಪ್ರಶ್ನೆಯೇ ಬರುವುದಿಲ್ಲ. ಯಾರೇ ಅಭ್ಯರ್ಥಿಯಾದ್ರು ಪಕ್ಷದ ಗೆಲುವುಗಾಗಿ ಶ್ರಮಿಸುವಂತೆ ಕರೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular