ಹುಬ್ಬಳ್ಳಿ: ಸಚಿವರ ಹೆಸರಲ್ಲಿ ಬೆದರಿಕೆ ಕರೆ ಆರೋಪದ ಹಿನ್ನೆಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ 8 ಜನರ ವಿರುದ್ಧ ಹುಬ್ಬಳ್ಳಿ ಶಹಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಬಗ್ಗೆ ಉದ್ಯಮಿ ವಿಜಯ್ ಅಳಗುಂದಗಿ ಎಂಬುವವರು ಪ್ರಕರಣ ದಾಖಲಿಸಿದ್ದಾರೆ.
ಹುಬ್ಬಳ್ಳಿಯ ಉಳ್ಳಾಗಡ್ಡಿ ಓಣಿ, ಬಟರ್ ಮಾರ್ಕೆಟ್,ಜವಳಿ ಸಾಲ ವ್ಯಾಪಾರಸ್ಥರಿಗೆ ಬೆದರಿಕೆ ಹಾಕಿ 2 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ. ಅಲ್ಲದೇ ಪ್ರತಿ ತಿಂಗಳು ನೀಡಬೇಕಾದ 1.70 ಲಕ್ಷ ಹಣವನ್ನೂ ಕೊಡಬೇಕು ಇಲ್ಲವಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.