HomeKarnatakaರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಈ ವರ್ಷವೇ 100 `ಗ್ರಾಮ ನ್ಯಾಯಾಲಯ’ ಸ್ಥಾಪನೆ

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಈ ವರ್ಷವೇ 100 `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಕೊಪ್ಪಳ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ತ್ವರಿತ ನ್ಯಾಯಕ್ಕಾಗಿ 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲೇ 100 ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು.  ಗ್ರಾಮ ನ್ಯಾಯಾಲಯಗಳಿಂದ ನ್ಯಾಯಾದಾನ ವ್ಯವಸ್ಥೆಗೆ ವಿಶೇಷ ಬಲ ಬರಲಿದ್ದು, ಪ್ರಕರಣದ ಇತ್ಯರ್ಥ ವಿಳಂಬ ತಪ್ಪಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮ ನ್ಯಾಯಾಲಯ ಸ್ಥಾಪನೆ ಯೋಜನೆಯನ್ನು 2008 ರಲ್ಲೇ ರೂಪಿಸಲಾಗಿತ್ತು. ಆಗ 2 ನ್ಯಾಯಾಲಯಗಳನ್ನಷ್ಟೇ ಆರಂಭಿಸಲಾಗಿತ್ತು. ಇದೀಗ ರಾಜ್ಯಾದ್ಯಂತ 100 ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular