alex Certify ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಡಿಸಿಆರ್ ಜಿ ಸೌಲಭ್ಯವನ್ನು ವಿಸ್ತರಿಸುವವರೆಗೆ ಸೇವಾನಿತ ಖಾಯಂ ಸಿಬ್ಬಂದಿಗಳು ಅಕಾಲಿಕ ಮರಣ ಹೊಂದಿದಲ್ಲಿ ಅಂತಹ ಸಿಬ್ಬಂದಿಗಳ ಅವಲಂಬಿತ ಕುಟುಂಬದವರಿಗೆ ಪರಿಹಾರ ಧನವನ್ನು ಪಾವತಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ವುತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಸತಿ ಶಿಕ್ಷಣ ನೀಡಿ ಉನ್ನತ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಟ್ಟು, ಸಾಮಾಜಿಕ ಸಮಾನತೆ ಸಾಧಿಸುವ ಘನ ಉದ್ದೇಶದಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವನ್ನು ಸ್ಥಾಪಿಸಲಾಗಿದೆ.

ಸರ್ಕಾರದ ವಿವಿಧ ಆದೇಶಗಳಲ್ಲಿ ವಸತಿ ಶಾಲೆಗಳನ್ನು ಮತ್ತು ಅವಶ್ಯಕ ಬೋಧಕ/ಬೋಧಕೇತರ ಸಿಬ್ಬಂದಿಗಳನ್ನು ಮಂಜೂರು ಮಾಡಲಾಗಿರುತ್ತದೆ. ಪುಸ್ತುತ 833 ವಸತಿ ಶಾಲೆ/ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ವಸತಿ ಶಾಲೆ/ಕಾಲೇಜುಗಳಲ್ಲಿ 19068 ಬೋಧಕ/ಬೋಧಕೇತರ ಹುದ್ದೆಗಳು ಮಂಜೂರಾಗಿರುತ್ತವೆ. ಸಂಘದ ವಸತಿ ಶಾಲೆಗಳಿಗೆ ಮಂಜೂರಾಗಿರುವ ಹುದ್ದೆಗಳಿಗೆ 2011 ರಿಂದ ತಹಲ್ ವರೆಗೆ ಹಂತ ಹಂತವಾಗಿ ವಿವಿಧ ನೇಮಕಾತಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಪುಸ್ತುತ ಒಟ್ಟಾರ 6403 ಖಾಯಂ ಬೋಧಕ/ಬೋಧಕೇತರ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ನೌಕರರಿಗೆ ದಿನಾಂಕ:01.04.2018 ರಿಂದ ಜಾರಿಗೆ ಬರುವಂತೆ ನಿವೃತ್ತಿ ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ (DCRG) ಸೌಲಭ್ಯವನ್ನು ವಿಸ್ತರಿಸಲು ಪುಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪುಸ್ತುತ ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿರುತ್ತದೆ. ಸಂಘದ ಅಧೀನದ ವಸತಿ ಶಾಲೆಗಳಲ್ಲಿ ಸೇವಾ ನಿರತ ಖಾಯಂ ಸಿಬ್ಬಂದಿಗಳು ಅಕಾಲಿಕ ಮರಣ ಹೊಂದಿದ್ದಲ್ಲಿ, ಅಂತಹ ಸಿಬ್ಬಂದಿಗಳ ಅವಲಂಬಿತ ಕುಟುಂಬದವರಿಗೆ ಆರ್ಥಿಕ ಸಹಾಯಧನವನ್ನು ನೀಡಲು. DCRG ವಿಸ್ತರಿಸಿರುವುದಿಲ್ಲವಾದರಿಂದ ಯಾವುದೇ ಆರ್ಥಿಕ ಸೌಲಭ್ಯವನ್ನು ನೀಡಿರುವುದಿಲ್ಲ.

ಆದ್ದರಿಂದ, ದಿನಾಂಕ:16.10.2023 ರಂದು ನಡೆದ ಸಭೆಯಲ್ಲಿ ವಸತಿ ಶಾಲೆಗಳ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪುಸ್ತಾಪಿತ DCRG ಸೌಲಭ್ಯವನ್ನು ವಿಸ್ತರಿಸುವವರೆಗೆ ಸೇವಾ ನಿರತ ಖಾಯಂ ಸಿಬ್ಬಂದಿಗಳು ಅಕಾಲಿಕ ಮರಣ ಹೊಂದಿದ್ದಲ್ಲಿ, ಇಡಿಗಂಟಿನ ಮಾದರಿಯಲ್ಲಿ ಆರ್ಥಿಕ ಸೌಲಭ್ಯವನ್ನಾದರೂ ನೀಡುವಂತೆ ಕೋರಿರುತ್ತಾರೆ. ಅದರಂತೆ ಪುಸ್ತಾವನೆ ಸಲ್ಲಿಸುವಂತೆ ಸಭೆಯಲ್ಲಿ ಸೂಚಿಸಲಾಗಿರುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...