ಬೆಂಗಳೂರು: ಬೆಂಗಳೂರಿನಲ್ಲಿ ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ(37) ಕೊಲೆಯಾದವರು.
ಒಂಟಿಯಾಗಿ ನೆಲೆಸಿದ ಪ್ರತಿಮಾ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ. ಮನೆಗೆ ನುಗ್ಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪತಿಯಿಂದ ವಿಚ್ಛೇದನ ಪಡೆದು ಪ್ರತಿಮಾ ಒಂಟಿಯಾಗಿ ನೆಲೆಸಿದ್ದರು. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಪತಿ ಮತ್ತು ಮಗ ನೆಲೆಸಿದ್ದಾರೆ. ಪ್ರೀ ಪ್ಲ್ಯಾನ್ ಮಾಡಿ ಪ್ರತಿಮಾ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.