HomeKarnataka1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ...

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ ದೊರೆತರೂ ಸಾಗಣೆ ವೆಚ್ಚ ಹೆಚ್ಚುವರಿ ಹೊರೆಯಾಗಲಿದೆ.

ಆಹಾರ ಇಲಾಖೆ ಆರಂಭದಿಂದಲೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡುತ್ತಿದೆ. ಸದ್ಯಕ್ಕಂತೂ ಅಕ್ಕಿ ಸಿಗುವ ಲಕ್ಷಣ ಕಾಣುತ್ತಿಲ್ಲ ಒಂದು ವೇಳೆ ಅಕ್ಕಿ ದೊರೆತರೂ ಸಾಗಾಟ, ದಾಸ್ತಾನು, ವಿತರಣೆ ಎಲ್ಲದಕ್ಕೂ ಹೆಚ್ಚುವರಿ ಖರ್ಚಾಗುತ್ತದೆ. ಆಹಾರ ನಿಗಮ ಹೊರತಾಗಿ ಬೇರೆ ಎಲ್ಲಿಂದಲೂ ಅಕ್ಕಿ ಖರೀದಿಸುವುದು ಬೇಡ ಎನ್ನುವ ಚಿಂತನೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ ವರೆಗೂ ಅಕ್ಕಿ ಬದಲಿಗೆ ಹಣ ಪಾವತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1.08 ಬಿಪಿಎಲ್, ಅಂತ್ಯೋದಯ 3.69 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಮಾಸಿಕ ಸರಾಸರಿ 605 ಕೋಟಿ ರೂ. ಪಾವತಿಸಲಾಗುತ್ತಿದೆ. ಜುಲೈ ಮತ್ತು ಆಗಸ್ಟ್ ಅಂತ್ಯದೊಳಗೆ ನಗದು ಪಾವತಿಸಿದ ಸರ್ಕಾರ ನಂತರ ವಿಳಂಬವಾಗಿ ಪಾವತಿಸುತ್ತಿದೆ. ಸೆಪ್ಟಂಬರ್ ತಿಂಗಳವರೆಗೆ ಮಂಜೂರಾಗಿದ್ದ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿದೆ. ಅಕ್ಟೋಬರ್ ತಿಂಗಳ ಹಣವನ್ನು ನವಂಬರ್ ನಲ್ಲಿ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular