ಮೈಸೂರು : ರಾಜಧಾನಿ ಬೆಂಗಳೂರಿನಲ್ಲಿ ಗಣಿ ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ ಪ್ರತಿಮಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗಣಿ ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ಬಗ್ಗೆ ಈಗಷ್ಟೇ ಮಾಹಿತಿ ಬಂದಿದ್ದು, ಪ್ರತಿಮಾ ಕಳೆದ ಐದು ವರ್ಷಗಳಿಂದ ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹತ್ಯೆಗೆ ಕಾರಣ ಏನು ಅಂತ ಗೊತ್ತಿಲ್ಲ. ಅಧಿಕಾರಿಗಳಿಂದ ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ ಎಂದು ತಿಳಿಸಿದರು.