ದಾವಣಗೆರೆ: ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕಾರ್ಮಿಕರು, ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಚಿವರು ಸಮಾಲೋಚನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಆನಂದಪ್ಪ, ಕೆಲಸದ ಸ್ಥಳದಲ್ಲಿ ಶೌಚಾಲಯ ಇಲ್ಲದೆ ಇರುವ ಕಾರಣ ಸಾವಿರಾರು ಮಹಿಳಾ ಕಾರ್ಮಿಕರು ನೈಸರ್ಗಿಕ ಕರೆ ತಡೆದುಕೊಳ್ಳುತ್ತಿದ್ದಾರೆ. ಇದರಿಂದ ಕಿಡ್ನಿ ಸಮಸ್ಯೆ ಸೇರಿ ಹಲವು ತೊಂದರೆಗೆ ಒಳಗಾಗುತ್ತಿದ್ದಾರೆ. ಮಹಿಳಾ ಕಾರ್ಮಿಕರ ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ತಿಂಗಳ ಮುಟ್ಟಿನ ಸಂದರ್ಭ ಏಕೆ ನೀಡಬೇಕು ಎಂದು ಪ್ರಸ್ತಾಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್, ಮಹಿಳಾ ಕಾರ್ಮಿಕರಿಗೆ ತಿಂಗಳಿಗ ಒಂದು ದಿನ ವೇತನ ಸಹಿತ ಮುತ್ತಿನ ರಜೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಹೇಳಿದ್ದಾರೆ.