ಶಿವಮೊಗ್ಗ : ಶಿವಮೊಗ್ಗ ಕುಂಸಿ ಉಪವಿಭಾಗದ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಪರ್ಕಿಸುವ ಎಸ್.ಎಸ್.-2 110 ಕೆ.ವಿ. ಮಾರ್ಗಕ್ಕೆ ಲಿಲೋ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು ಕುಂಸಿ ವಿ.ವಿ.ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ನ.08 ಮತ್ತು 09 ರಂದು ಎರಡು ದಿನ ಬೆಳಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂಸಿ, ಚೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ಡೊಟ್ಟಿಮಟ್ಟಿ, ಕೊರಗಿ, ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.