HomeKarnatakaBREAKING : ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ : ಆರೋಪಿ ಕಿರಣ್ 15 ದಿನ...

BREAKING : ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ : ಆರೋಪಿ ಕಿರಣ್ 15 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿರಣ್ ನನ್ನು 15 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇಂದು ವಿಚಾರಣೆ ನಡೆಸಿದ 2 ನೇ ಎಸಿಎಂಎಂ ಕೋರ್ಟ್ ಆರೋಪಿ ಕಿರಣ್ ನನ್ನು 15 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ 8.30 ರ ಸುಮಾರಿಗೆ ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರತಿಮಾ ಕೆ.ಎಸ್ (45) ಅವರ ಶವ ಪತ್ತೆಯಾಗಿತ್ತು.
ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸರ್ಕಾರಿ ಅಧಿಕಾರಿ ಪ್ರತಿಮಾರನ್ನು ಕೊಲೆ ಮಾಡಿದ್ದೇನೆ ಎಂದು ಬಂಧಿತ ಆರೋಪಿ ಮಾಜಿ ಕಾರು ಚಾಲಕ ಕಿರಣ್ ತಪ್ಪೊಪ್ಪಿಕೊಂಡಿದ್ದನು.ಈತ 4 ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಪ್ರತಿಮಾ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ನಂತರ ಈತ ಕಾರು ಅಪಘಾತ ಮಾಡಿದ್ದನು, ನಂತರ ಪ್ರತಿಮಾ ನನಗೆ ವಿನಾಕಾರಣ ಬೈಯುತ್ತಿದ್ದರು. ಕೆಲಸ ಬಿಟ್ಟು ಹೋಗುವಂತೆ ಹೇಳುತ್ತಿದ್ದರು ಎಂದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular