HomeKarnatakaಭಾರತದಲ್ಲಿ ಹಮಾಸ್ ಮಾದರಿ ದಾಳಿ ಆಗದಿರಲು ಮೋದಿ ಮತ್ತೆ ಪ್ರಧಾನಿಯಾಗಬೇಕು: ಯತ್ನಾಳ್

ಭಾರತದಲ್ಲಿ ಹಮಾಸ್ ಮಾದರಿ ದಾಳಿ ಆಗದಿರಲು ಮೋದಿ ಮತ್ತೆ ಪ್ರಧಾನಿಯಾಗಬೇಕು: ಯತ್ನಾಳ್

ಚಾಮರಾಜನಗರ: ಬಿಜೆಪಿಯಲ್ಲಿ ವಿ. ಸೋಮಣ್ಣ ಅವರಿಗೆ ದೊಡ್ಡ ಭವಿಷ್ಯವಿದೆ. ಅವರ ಕೊಡುಗೆ ದೊಡ್ಡದಿದೆ. ಹೀಗಾಗಿ ಹೈಕಮಾಂಡ್ ಬರ ಅಧ್ಯಯನ ತಂಡದಲ್ಲಿ ಅವರಿಗೆ ಸ್ಥಾನ ಕೊಟ್ಟಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಿದರೆ ರಾಜ್ಯಾಧ್ಯಕ್ಷ ಆಗಬಹುದು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ವಿ. ಸೋಮಣ್ಣ ಕಡೆಗಣನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ ಎಂಬ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ತಮ್ಮಲ್ಲಿರುವ 136 ಶಾಸಕರನ್ನು ಸಮಾಧಾನಪಡಿಸಬೇಕಿದೆ. ಬಿಜೆಪಿ ಬಿಟ್ಟು ಯಾರಾದರೂ ಕಾಂಗ್ರೆಸ್ ಗೆ ಹೋದ್ರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಹಗಲಿರುಳು ದುಡಿಯಬೇಕಿದೆ. ಇಸ್ರೇಲ್ ನಲ್ಲಿ ಆಗಿರುವ ಹಮಾಸ್ ಮಾದರಿ ದಾಳಿ ಭಾರತದಲ್ಲಿ ಆಗಬಾರದು. 2024ಕ್ಕೆ ನರೇಂದ್ರ ಮೋದಿ ದೇಶಕ್ಕೆ ಮತ್ತೆ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular