ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡ ಸಾಮಾನ್ಯ ನಿರುದ್ಯೋಗಿ ಯುವಕ, ಯವತಿಯರಿಂದ ಅರ್ಜಿ ಅಹ್ವಾನಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ವಿಳಾಸ https://sevasindhu.karnataka.gov.in ನಲ್ಲಿ ಅರ್ಜಿಗಳು ಲಭ್ಯವಿರುತ್ತವೆ. ಆಸಕ್ತರು ಗ್ರಾಮಒನ್, ಹುಬ್ಬಳ್ಳಿ ಧಾರವಾಡ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾತ್ರ ಆನ್ಲೈನ್ ಮೂಲಕ ನವೆಂಬರ್ 29, 2023 ಒಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ: 9482-300-400 ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮ, ಪ್ಲಾಟ ನಂ.4, ಸತ್ತೂರ ಕಾಲನಿ, 1ನೇ ಕ್ರಾಸ, ವಿದ್ಯಾಗಿರಿ, ಧಾರವಾಡ–580004 ಹಾಗೂ ದೂ.ಸಂ:0836-2460855 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.