ಬೆಂಗಳೂರು: ನವೆಂಬರ್ 15ರೊಳಗೆ ರಾಜ್ಯ ಸರ್ಕಾರ ತಮ್ಮ ಬೇಡಿಕೆ ಈಡೇರಿಸದಿದ್ದರೆ ನವೆಂಬರ್ 16ರಿಂದ ರಾಜ್ಯದಾದ್ಯಂತ ಶಾಲೆಗಳಲ್ಲಿ ಬಿಸಿಯೂಟ ನೀಡುವುದನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು.
ಸಿಐಟಿಯು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾ ಈ ಕುರಿತಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಕ್ಷರ ದಾಸೋಹ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 30 ರಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ದೀಪಾವಳಿ ಹಿನ್ನೆಲೆಯಲ್ಲಿ ನ. 10 ರವರೆಗೂ ಹೋರಾಟ ನಡೆಸಲಿದ್ದು, ನಂತರ ಊರಿಗೆ ತೆರಳುತ್ತೇವೆ. ನ. 15ರೊಳಗೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ನ.16 ರಿಂದ ಆರರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ನೀಡುವ ಬಿಸಿಯೂಟ ಬಂದ್ ಮಾಡಲಾಗುವುದು. 55.800ಕ್ಷ ಮಕ್ಕಳಿಗೆ ಬಿಸಿಯೂಟ ನೀಡುವುದನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.