HomeKarnatakaಮಹಾ ಮಳೆಯಿಂದ ತತ್ತರಿಸಿದ ಬೆಂಗಳೂರು ಜನತೆಗೆ ಶಾಕ್, ಯೆಲ್ಲೋ ಅಲರ್ಟ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ...

ಮಹಾ ಮಳೆಯಿಂದ ತತ್ತರಿಸಿದ ಬೆಂಗಳೂರು ಜನತೆಗೆ ಶಾಕ್, ಯೆಲ್ಲೋ ಅಲರ್ಟ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲೂ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ರಭಸವಾಗಿ ನೀರು ಹರಿದು ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಶುರುವಾದ ಮಳೆ ರಾತ್ರಿಯೂ ಮುಂದುವರೆದಿದೆ. ಯಲಹಂಕ, ಮೆಜೆಸ್ಟಿಕ್, ಶ್ರೀರಾಂಪುರ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಅಂಡರ್ ಪಾಸ್ ಮತ್ತು ಪ್ರಮುಖ ಜಂಕ್ಷನ್ ಸೇರಿ ಮುಖ್ಯ ರಸ್ತೆಗಳಲ್ಲಿ ನೀರು ನಿಂತ ಕಾರಣ ಸಂಚಾರಕ್ಕೆ ತೊಂದರೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾವೇರಿ ಜಂಕ್ಷನ್ ಅಂಡರ್ ಪಾಸ್, ಶಿವಾನಂದ ರೈಲ್ವೆ ಅಂಡರ್ ಪಾಸ್, ಮಹದೇವಪುರ ಸೇಲಂ ಬ್ರಿಡ್ಜ್, ಓಕಳಿಪುರ ಅಂಡರ್ ಪಾಸ್, ಹೆಸರುಘಟ್ಟ ಕ್ರಾಸ್, ಮಾನ್ಯತಾ ಟೆಕ್ ಪಾರ್ಕ್, ಟಿನ್ ಫ್ಯಾಕ್ಟರಿ, ಹಳೆ ಏರ್ಪೋರ್ಟ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ನವೆಂಬರ್ 7ರ ಮಂಗಳವಾರ ಕೂಡ ಭಾರಿ ಮಳೆ ಆಗುವ ಸಂಭವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ರಾಜ್ಯದಲ್ಲಿಯೂ ಮಳೆ

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಂಭವ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಆಗಲಿದೆ. ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ನವೆಂಬರ್ 8 ರಿಂದ 10 ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular