HomeKarnatakaBIG NEWS: ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳ ಮಾರಾಟ; ಐವರು ಆರೋಪಿಗಳು ಅರೆಸ್ಟ್

BIG NEWS: ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳ ಮಾರಾಟ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ವನ್ಯಜೀವಿ ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬೆಂಗಳೂರಿನ ವೈಯ್ಯಾಲಿ ಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ್, ರಂಗಸ್ವಾಮಿ, ಲೋಕೇಶ್, ಶೇಖರ್ ಹಾಗೂ ರೈಮಂಡ್ ಬಂಧಿತ ಆರೋಪಿಗಳು. ಜಿಂಕೆ ಕೊಂಬು, ಆನೆ ದಂತ, ಎರಡು ತಲೆ ಹಾವು ಸೇರಿದಂತೆ ವಿವಿಧ ವನ್ಯಜೀವಿ ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತರಿಂದ 5 ಲಕ್ಷ ಮೌಲ್ಯದ ಆನೆ ದಂತ, 12 ಲಕ್ಷ ಮೌಲ್ಯದ 12 ಜಿಂಕೆ ಕೊಂಬು ಹಾಗೂ 10 ಲಕ್ಷ ಮೌಲ್ಯದ ಎರಡು ತಲೆ ಹಾವುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular