HomeIndiaಬೆಂಗಾವಲು ವಾಹನ ಡಿಕ್ಕಿ: ಶಿಕ್ಷಕ ಸಾವು, 3 ಮಂದಿಗೆ ಗಾಯ: ಅಪಘಾತದಲ್ಲಿ ಕೇಂದ್ರ ಸಚಿವ ಪಾರು

ಬೆಂಗಾವಲು ವಾಹನ ಡಿಕ್ಕಿ: ಶಿಕ್ಷಕ ಸಾವು, 3 ಮಂದಿಗೆ ಗಾಯ: ಅಪಘಾತದಲ್ಲಿ ಕೇಂದ್ರ ಸಚಿವ ಪಾರು

ಭೋಪಾಲ್: ಮಂಗಳವಾರ ರಸ್ತೆ ಅಪಘಾತದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಪಾರಾಗಿದ್ದಾರೆ. ಅವರ ಬೆಂಗಾವಲು ವಾಹನ ಬೈಕ್‌ ಗೆ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ಬೈಕ್ ಚಲಾಯಿಸುತ್ತಿದ್ದ 35 ವರ್ಷದ ಶಿಕ್ಷಕ ಪ್ರಾಣ ಕಳೆದುಕೊಂಡಿದ್ದು, ಇತರ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಪ್ರಹ್ಲಾದ್ ಪಟೇಲ್ ಅವರ ಬೆಂಗಾವಲು ಪಡೆ ಚಿಂದ್ವಾರದಿಂದ ನರಸಿಂಗ್‌ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಪ್ಪು ದಿಕ್ಕಿನಲ್ಲಿ ಸಾಗುತ್ತಿದ್ದ ಮೋಟಾರ್ ಸೈಕಲ್ ಸವಾರನನ್ನು ರಕ್ಷಿಸಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಪ್ರಹ್ಲಾದ್ ಪಟೇಲ್ ಅವರು ಕೇಂದ್ರ ಸಚಿವರಷ್ಟೇ ಅಲ್ಲ, ಚುನಾವಣೆಯಲ್ಲಿ ಅಭ್ಯರ್ಥಿಯೂ ಆಗಿದ್ದು, ಚಿಂದ್ವಾರ ಮತ್ತು ನರಸಿಂಗ್‌ಪುರ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular