ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ.
ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಡಲು 30 ಇಲಾಖೆಗಳಿಂದ ಪ್ರಸ್ತಾವನೆ ಬಂದಿದ್ದು, ಸುಮಾರು ಮೂರು ಸಾವಿರ ಹುದ್ದೆಗಳು ಇವೆ. ಈ ಹುದ್ದೆಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಮುಂದಿನ ವರ್ಷದಲ್ಲಿ ನಡೆಸಬೇಕಾಗಿರುವ ನೇಮಕಾತಿ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ.
ನೇಮಕಾತಿ ಬಗ್ಗೆ ಮಾಹಿತಿ ಸಿಕ್ಕರೆ ವಿದ್ಯಾರ್ಹತೆ ಅನುಸಾರ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಕೆ.ಪಿ.ಎಸ್.ಸಿ. ಕೂಡ ಅರ್ಜಿ ಆಹ್ವಾನ, ಪರೀಕ್ಷೆ, ಫಲಿತಾಂಶ, ಆಯ್ಕೆ ಪಟ್ಟಿ ಚಟುವಟಿಕೆಗಳನ್ನು ನಿಗದಿಯಂತೆ ಕಾಲಮಿತಿಯಲ್ಲಿ ಮುಗಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೆ.ಪಿ.ಎಸ್.ಸಿ. ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ತಿಳಿಸಿದ್ದಾರೆ.