HomeKarnatakaBIG NEWS: ಬಸ್ ಗಳಲ್ಲಿ ಪಟಾಕಿ ನಿಷೇಧ: ಸಾಗಿಸಿದರೆ ಕಠಿಣ ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

BIG NEWS: ಬಸ್ ಗಳಲ್ಲಿ ಪಟಾಕಿ ನಿಷೇಧ: ಸಾಗಿಸಿದರೆ ಕಠಿಣ ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬಸ್, ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿದೆ.

ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ಮಾಡುವುದನ್ನು ಸಾರಿಗೆ ಇಲಾಖೆ ನಿಷೇಧಿಸಿದ್ದು, ಆದೇಶ ಮೀರಿ ಪಟಾಕಿ ಸಾಗಿಸಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಪ್ರಯಾಣಿಕರು ತಮ್ಮೊಂದಿಗೆ ಪಟಾಕಿ ತೆಗೆದುಕೊಂಡು ಹೋಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸುವಂತೆ ಖಾಸಗಿ ಬಸ್ ಮಾಲೀಕರಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ಪಟಾಕಿ ಪತ್ತೆಯಾದಲ್ಲಿ ಅಂತಹ ಪ್ರಯಾಣಿಕರು ಮತ್ತು ಬಸ್ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕ ವಾಹನ ಹೊರತುಪಡಿಸಿ ಗೂಡ್ಸ್ ವಾಹನಗಳಲ್ಲಿ ಪಟಾಕಿ ಸಾಗಣೆಗೆ ಅವಕಾಶ ನೀಡಿದ್ದರೂ ಸಾರಿಗೆ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಒಂದು ವೇಳೆ ಅನುಮತಿ ಪಡೆಯದೆ ಪಟಾಕಿ ಸಾಗಿಸಿದ್ದಲ್ಲಿ ಅಂತಹ ವಾಹನಗಳ ಪರ್ಮಿಟ್ ರದ್ದು ಮಾಡಿ ವಶಕ್ಕೆ ಪಡೆಯಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular