HomeKarnatakaBIG NEWS: ನ. 14 ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸಲು ಸರ್ಕಾರ ಆದೇಶ

BIG NEWS: ನ. 14 ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸಲು ಸರ್ಕಾರ ಆದೇಶ

ಬೆಂಗಳೂರು: ನವೆಂಬರ್ 14ರಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ದೀಪಾವಳಿಯ ಬಲಿಪಾಡ್ಯಮಿ ದಿನ ನವೆಂಬರ್ 14ರಂದು ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗ್ರಾಸವನ್ನು ಹಸುವಿಗೆ ತಿನ್ನಿಸಿ ಸಂಜೆ 5.30ರಿಂದ 6.30ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಆಯೋಜಿಸಬೇಕು. ಈ ಬಗ್ಗೆ ದೇವಸ್ಥಾನದ ಸೂಚನಾ ಫಲಕದಲ್ಲಿ ಮಾಹಿತಿ ಪ್ರಕಟಿಸಬೇಕು ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular