ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ 18 ವರ್ಷ  ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ನ.31 ರೊಳಗಾಗಿ ಡೇ-ನಲ್ಮ್ ಶಾಖೆಗೆ ಸಲ್ಲಿಸಬೇಕು.

ಯೋಜನೆಗಳು:

ಸ್ವಯಂ ಉದ್ಯೋಗ ಕಾರ್ಯಕ್ರಮ(ವೈಯಕ್ತಿಕ):

ವೈಯಕ್ತಿಕ  ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷವರೆಗೆ ಸೇವಾ ವಲಯ ಬ್ಯಾಂಕ್‍ಗಳಿಂದ ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು.

ಅರ್ಹತೆ:

ಅಭ್ಯರ್ಥಿ  ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರಾಗಿರಬೇಕು ಅಥವಾ ಅವರ ಮನೆಯಲ್ಲಿ ಯಾರಾದರೂ ಒಬ್ಬರು ಸಂಘದ ಸದಸ್ಯರಾಗಿರಬೇಕು. ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಾಗ 18 ವರ್ಷ ವಯಸ್ಸು ಪೂರೈಸಿರಬೇಕು.

ಸ್ವಯಂ ಉದ್ಯೋಗ ಕಾರ್ಯಕ್ರಮ(ಗುಂಪು):

ಎಸ್‍ಜೆಆರ್‍ಎಸ್‍ವೈ ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ  ಸ್ವಸಹಾಯ ಉದ್ದಿಮೆ/ಚಟುವಟಿಕೆಗಳನ್ನು  ಪ್ರಾರಂಭಿಸಲು ರೂ.10 ಲಕ್ಷಗಳವರೆಗೆ ಸೇವಾ ವಲಯ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುವುದು ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7 ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು.

ಅರ್ಹತೆ:  ಗುಂಪಿನ ಎಲ್ಲಾ ಸದಸ್ಯರ ವಯಸ್ಸು 18 ವರ್ಷ ಪೂರೈಸಿರಬೇಕು. ಗುಂಪು ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಸಂಘ ಅಥವಾ ಕನಿಷ್ಟ 5 ಜನ ಸದಸ್ಯರ ಜೆ.ಎಲ್.ಜಿ ಗುಂಪು ಇರಬೇಕು ಹಾಗೂ ಸದರಿ ಸದಸ್ಯರು ಶೇ.70 ರಷ್ಟು ಬಡ  ಕುಟುಂಬದವರಾಗಿರಬೇಕು.

ಸ್ವಸಹಾಯ ಸಂಘಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್:

ಎಸ್‍ಜೆಆರ್‍ಎಸ್‍ವೈ ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ ಗುಂಪುಗಳು ಖಾತೆ ಹೊಂದಿರುವ ಬ್ಯಾಂಕ್‍ಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವುದು. (ಬ್ಯಾಂಕ್ ಲಿಂಕೇಜ್).

ಅರ್ಹತೆ: ಸ್ವಸಹಾಯ ಗುಂಪುಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಆವರ್ತಕ ನಿಧಿ ಪಡೆದಿರಬೇಕು.

ಸೂಚನೆ:

ಮೇಲ್ಕಂಡ ಯೋಜನೆಯ ಮಾರ್ಗಸೂಚಿಯ  ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ನಿಗದಿತ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗುವುದು.

ಲಗತ್ತಿಸಬೇಕಾದ ದಾಖಲಾತಿಗಳು:

ಜಾತಿ ಮತ್ತು  ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್‍ಕಾರ್ಡ್, ಮತದಾರರ ಗುರುತಿನ ಚೀಟಿ, ಇತ್ತೀಚಿನ ಮೂರು ಭಾವ ಚಿತ್ರಗಳು, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read