ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಹಣ ಸಂದಾಯವಾಗದ ಹಿನ್ನೆಲೆಯಲ್ಲಿ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಫೀಲ್ಡ್ ಗಿಳಿದು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆ ಅರ್ಜಿ ವಿಲೇವಾರಿಯಾಗದೇ ಬಾಕಿ ಇರುವ ಬಗ್ಗೆ ಅಧಿಕಾರಿಗಳ ವಿರುದ್ಧ ಗರಂ ಆದರು.
ಪ್ರತಿ ಜಿಲ್ಲೆಯ ಮಾಹಿತಿ ಪಡೆದ ಸಚಿವರು, ಕಲಬುರಗಿ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 14 ಸಾವಿರ ಅರ್ಜಿ ವಿಲೇವಾರಿ ಬಾಕಿ ಉಳಿದಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. ಶೀಘ್ರವಾಗಿ ಅರ್ಜಿಯನ್ನ ವಿಲೇವಾರಿ ಮಾಡಲು ಎನು ಸಮಸ್ಯೆ? ಯಾಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಸಿಡಿಪಿಓಗಳನ್ನು ತರಾಟೆಗೆ ತೆಗೆದುಕೊಂಡರು.
ವಾರದೊಳಗೆ ಎಲ್ಲಾ ಅರ್ಜಿ ವಿಲೇವಾರಿ ಮಾಡೋದಾಗಿ ಸಿಡಿಪಿಓ ಮಾಹಿತಿ ನೀಡಿದರು. ಶೀಘ್ರವಾಗಿ ವಿಳಂಬ ಅರ್ಜಿಗಳು ವಿಲೇವಾರಿ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದರು.