ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪೋಷಕರ ವಾರ್ಷಿಕ ಆದಾಯ ರೂ.6 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್ಗೆ ಗರಿಷ್ಠ ರೂ.20 ಲಕ್ಷ ಹಾಗೂ ರೂ.6 ಲಕ್ಷದಿಂದ ರೂ.15 ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್ಗೆ ರೂ.10 ಲಕ್ಷ ಗರಿಷ್ಠ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. ಇಲಾಖಾ ವೆಬ್ಸೈಟ್ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.
ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕಚೇರಿಯನ್ನು ಹಾಗೂ ದೂ.ಸಂ.08272-225528 ಹಾಗೂ ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.