ಬೀದರ್ : ಬೀದರ್ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪ (Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.4 ರಷ್ಟು ತೀವ್ರತೆ ದಾಖಲಾಗಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ನ ವಡ್ಡನಕೇರಾ, ಮದರಗಾಂವ್ ನಲ್ಲಿ ಮತ್ತೆ ಭೂಮಿ ಕಂಪಿಸಿದ್ದು, 2.4 ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪವಾಗಿದ್ದು, 157 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದೀಗ ಬೀದರ್ ಜಿಲ್ಲೆಯಲ್ಲೇ ಭೂಕಂಪನ ಸಂಭವಿಸಿದ ಹಿನ್ನೆಲೆ ಜನರು ಆತಂಕಗೊಂಡಿದ್ದಾರೆ.
ನ.6 ರಂದು ಬೀದರ್ ಜಿಲ್ಲೆಯಲ್ಲಿ ಎರಡು ಬಾರಿ ಲಘು ಭೂಕಂಪವಾಗಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿತ್ತು. ಇದೀಗ 2 ದಿನದಲ್ಲಿ ಮತ್ತೆ ಭೂಮಿ ಕಂಪಿಸಿದೆ.