HomeKarnatakaಗಮನಿಸಿ...! 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಗಮನಿಸಿ…! 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಪೂರ್ವ ದಿಕ್ಕಿನಿಂದ ತೇವಾಂಶ ಭರಿತ ಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ದಕ್ಷಿಣ ಒಳನಾಡಿನ ಹಾಸನ, ಕರಾವಳಿಯ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10 ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರ್ಭಟಿಸಿದೆ. ಬೆಂಗಳೂರು, ಹಾಸನ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾದ ವರದಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular