ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸಮಾಲೋಚನೆ ನಡೆಸಿದ್ದಾರೆ.
ಡಿಸಿಎಂ ಗೃಹ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ತೇಜಸ್ವಿ ಸೂರ್ಯ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಬುಧವಾರ ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.