HomeKarnatakaBIG NEWS: ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI

BIG NEWS: ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI


ಬೆಂಗಳೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಬೆಂಗಳೂರಿನ ಮಹದೇವಪುರ ಆರ್ ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

ಆರ್.ಐ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದವರು. ಕೃಷಿ ಭೂಮಿಗೆ ಖಾತೆ ಪೋಡಿ ಮಾಡಿಕೊಡಲು 28 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಸಂತ್, 4 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಸಂತ್ ಅವರನ್ನು ಬಂಧಿಸಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ವಸಂತ್ ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿ ಗಳು ದಾಳಿ ನಡೆಸಿ 9 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಖಾತೆ ಪೋಡಿ ಮಾಡಿಕೊಡಲು 28 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವಸಂತ್ ಅದಾಗಲೇ 3.5 ಲಕ್ಷ ಹಣ ಹಾಗೂ 4 ಲಕ್ಷ ರೂಪಾಯಿ ಚೆಕ್ ಪಡೆದುಕೊಂಡಿದ್ದರು. ಈಗ 4 ಲಕ್ಷ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular