HomeKarnatakaBIG NEWS: ಆರ್.ಡಿ. ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲೂ ಅಕ್ರಮ ನಡೆಸಿದ್ದಾನೆ; ಆತ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು?;...

BIG NEWS: ಆರ್.ಡಿ. ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲೂ ಅಕ್ರಮ ನಡೆಸಿದ್ದಾನೆ; ಆತ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು?; ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲಿಯೂ ಅಕ್ರಮ ನಡೆಸಿದ್ದಾನೆ. ಆತ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು? ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಆರ್.ಡಿ.ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್ ಅಗಿರುವ ವಿಚಾರವಾಗಿ ಮಾತನಾಡಿರುವ ಅರಗ ಜ್ಞಾನೇಂದ್ರ, ಆರ್.ಡಿ.ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲಿಯೂ ಅಕ್ರಮ ಮಾಡಿದ್ದಾನೆ. ನಮ್ಮ ಸರ್ಕಾರ ಇದ್ದಾಗ ಹೆಡೆಮುರಿ ಕಟ್ಟಿ ಅರೆಸ್ಟ್ ಮಾಡಿದ್ದೆವು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ. ಈಗ ಆತ ತಪ್ಪಿಸಿಕೊಂಡು ಹೋಗಲು ಬಿಟ್ಟವರು ಯಾರು? ಪೊಲೀಸರ ಕೈವಾಡವಿಲ್ಲದೇ ಆತ ತಪ್ಪಿಸಿಕೊಳ್ಳಲು ಆಗಲ್ಲ ಎಂದು ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಡಿ.ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಿಂತಿದ್ದಾರೆ. ಪರೀಕ್ಷಾ ಕೇಂದ್ರ ಸೆಲೆಕ್ಟ್ ಮಾಡುವುದು ಸಹ ಆರ್.ಡಿ.ಪಾಟೀಲ್. ಇಂತಹ ವ್ಯಕ್ತಿಗಳಿಗೆ ರಕ್ಷಣೆ ಕೊಡುವುದು ಕಾಂಗ್ರೆಸ್ ಸರ್ಕಾರದವರು. ಪೊಲಿಸರ ವಿರುದ್ಧವೂ ತನಿಖೆ ಮಾಡಲಿ ಎಂದು ಆಗ್ರಹಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular