HomeKarnatakaBREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಟ್ಯಾಂಕರ್ –ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ...

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಟ್ಯಾಂಕರ್ –ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಾ ಗ್ರಾಮದ ಬಳಿ ಟ್ಯಾಂಕರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಆರು ಜನ ಸಾವನ್ನಪ್ಪಿದ್ದಾರೆ.

ಮೃತರು ಚಿತ್ತಾಪುರದ ನಾಲವಾರ ಗ್ರಾಮದವರು ಎಂದು ಹೇಳಲಾಗಿದೆ. ಚಿತ್ತಾಪುರ ತಾಲೂಕಿನ ಹಲಕರ್ಟಾ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದವರು ಮೃತಪಟ್ಟಿದ್ದಾರೆ. ಟ್ಯಾಂಕರ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಆಟೋದಲ್ಲಿದ್ದ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಸ್ಮಿನ್ ಬೇಗಂ, ಫಾತಿಮಾ, ಅಬೂಬಕರ್, ಮರಿಯಂ, ಮಹಮ್ಮದ್ ಪಾಷಾ, ಆಟೋ ಚಾಲಕ ಬಾಬಾ ಮೃತಪಟ್ಟವರು. ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ತೆರಳುವಾಗ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular