HomeKarnatakaಕಲಬುರಗಿಯಲ್ಲಿ ಟಂಟಂಗೆ ಲಾರಿ ಡಿಕ್ಕಿಯಾಗಿ ಘೋರ ದುರಂತ : 3 ತಿಂಗಳ ಮಗು ಸೇರಿ ಒಂದೇ...

ಕಲಬುರಗಿಯಲ್ಲಿ ಟಂಟಂಗೆ ಲಾರಿ ಡಿಕ್ಕಿಯಾಗಿ ಘೋರ ದುರಂತ : 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣ

ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಂಟಂ ಹಾಗೂ ಟ್ಯಾಂಕರ್ ಮಧ್ಯೆ ಡಿಕ್ಕಿಯಾಗಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ  ಚಿತ್ತಾಪುರ ತಾಲೂಕಿನ ಹಲಕರ್ಟಿ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಜ್ಜಿನ್ ಬೇಗಂ (28), ಬೀಬಿ ಫಾತಿಮಾ (12), ಅಬೂಬಕ್ಕರ್ (4), ಬೀಬಿ ಮರಿಯಮ್ ( 3 ತಿಂಗಳ ಮಗು), ಹಮ್ಮದ್ ಪಾಷಾ (20), ಆಟೋ ಚಾಲಕ ಬಾಬಾ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತಪಟ್ಟವರು ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮಕ್ಕೆ ಸೇರಿದವರಾಗಿದ್ದು, ಆಧಾರ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿ ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular