ಬೆಂಗಳೂರು : ಕೆಇಎ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಸಹಚರ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಶಿವಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಈತ ಆರ್ ಡಿ ಪಾಟೀಲ್ ಸಹಚರನಾಗಿದ್ದು, ಆತನ ಎಲ್ಲಾ ಕೃತ್ಯಗಳಿಗೆ ಈತ ಸಹಕಾರ ನೀಡುತ್ತಿದ್ದನು ಎಂದು ತಿಳಿದು ಬಂದಿದೆ.
ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಹಾಗೆಯೇ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೆ ರಕ್ಷಣೆ ನೀಡಿದ್ದ ಆರೋಪದಲ್ಲಿ ಫ್ಲಾಟ್ ಮಾಲೀಕ ಹಾಗೂ ಮ್ಯಾನೇಜರ್ ಹಾಪುರದ ಶಂಕರ ಗೌಡಯಾಳವಾರ್ ಹಾಗೂ ದಿಲೀಪ್ ಪವಾರ್ ನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.