ಬೆಂಗಳೂರು : ಬೆಂಗಳೂರಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ, ಎಲ್ಲರೂ ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಮೀಷನರ್ ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಂಗಳೂರಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ. ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ನಾವು ವಾಹನ ತಪಾಸಣೆ ಮಾಡಲಿದ್ದೇವೆ ಎಂದು ಅವರು ಮಾಹಿತಿ ನೀಡಿದರು. ಹಾಗೂ ಅನಧಿಕೃತ ಪಟಾಕಿ ಮಾರಾಟ ಪತ್ತೆ ಹಚ್ಚಲು ಟಾಸ್ಕ್ಫೋರ್ಸ್ ರಚನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
ಬೆಂಗಳೂರಲ್ಲಿ ಒಟ್ಟು 62 ಮೈದಾನದಲ್ಲಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ. 964 ಜನರು ಪಟಾಕಿ ಮಾರಾಟದ ಲೈಸೆನ್ಸ್ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 263 ಜನರಿಗೆ ಲಾಟರಿ ಮೂಲಕ ಲೈಸೆನ್ಸ್ ನೀಡಲಾಗಿದೆ ಎಂದರು. ಆನಧಿಕೃತವಾಗಿ ಪಟಾಕಿ ಮಾರಿದ್ರೆ ಕ್ರಮ ಕೈಗೊಳ್ಳುತ್ತೇವೆ, ಸಾರ್ವಜನಿಕರು ಹಸಿರು ಪಟಾಕಿಗಳನ್ನು ಗುರುತಿಸಿ ಬಳಸಬೇಕು ಎಂದರು.