HomeKarnataka`ಅನ್ನಭಾಗ್ಯ ಯೋಜನೆ' ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ `ಉಚಿತ 10 ಕೆಜಿ ಅಕ್ಕಿ' ವಿತರಣೆ

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ `ಉಚಿತ 10 ಕೆಜಿ ಅಕ್ಕಿ’ ವಿತರಣೆ

 

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.  ಮುನಿಯಪ್ಪ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಶೀಘ್ರವೇ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಅಕ್ಕಿ ಖರೀದಿ ಸಂಬಂಧ ಟೆಂಡರ್ ಪ್ರಕ್ರಿಯೆ ಶುರು ಮಾಡುತಿದ್ದೇವೆ. ಟೆಂಡರ್ ಬಳಿಕ ಅಕ್ಕಿ ರಾಜ್ಯಕ್ಕೆ ಬರಲಿದ್ದು, ಬಳಿಕ ಗ್ಯಾರಂಟಿಯಂತೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದರು.

ನ್ಯಾಯಬೆಲೆ ಅಂಗಡಿಯವರ ಜೊತೆಗೆ ಈಗಾಗಲೇ ಮಾತುಕತೆ ನಡೆಸಿದ್ದೇವೆ. 1 ತಿಂಗಳಲ್ಲಿ ನ್ಯಾಯಬೆಲೆ ಅಂಗಡಿಗಳ ಸಮಸ್ಯೆ ನಿವಾರಿಸುತ್ತೇವೆ. ಪಡಿತರದಾರರಿಗೆ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ವೇಳೆ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ, ಉಳಿದ 5 ಕೆಜಿ ಅಕ್ಕಿಬದಲಿಗೆ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿತ್ತು. ಇದೀಗ  ಸಂಪೂರ್ಣವಾಗಿ 10 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular