ಬೆಂಗಳೂರು: ಬಸ್ ಪ್ರಯಾಣದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಸಿಹಿ ಸುದ್ದಿ ಸಿಕ್ಕಿದೆ.
ಬಸ್ ಪ್ರಯಾಣದರ ಏರಿಕೆ ಸದ್ಯಕ್ಕಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ದೇವನಹಳ್ಳಿ ಬಿಎಂಟಿಸಿ ಬಸ್ ಡಿಪೋಗೆ ಶುಕ್ರವಾರ ಭೇಟಿ ನೀಡಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳ ಕುರಿತಾಗಿ ಆಯೋಗ ರಚಿಸುವಂತೆ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ವರದಿ ನೀಡಿದ್ದು, ಅವರ ಪ್ರಸ್ತಾಪವನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳಕ್ಕೆ ಆಯೋಗ ರಚಿಸಿದಲ್ಲಿ ಅದು ಕೈಗೊಳ್ಳುವ ತೀರ್ಮಾನದಂತೆ ಪ್ರಯಾಣ ದರ ಹೆಚ್ಚಳ ಮಾಡಬೇಕಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗುತ್ತದೆ. ಸದ್ಯಕ್ಕೆ ಬಸ್ ಪ್ರಯಾಣದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.