HomeKarnatakaBIG NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; ಅಭಿನವ ಹಾಲಶ್ರೀ ಬಿಡುಗಡೆ

BIG NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; ಅಭಿನವ ಹಾಲಶ್ರೀ ಬಿಡುಗಡೆ

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಚೈತ್ರಾ & ಗ್ಯಾಂಗ್ ನ ಅಭಿನವ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದ ಅಭಿನವ ಹಾಲಶ್ರೀಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭಿನವ ಹಾಲಶ್ರೀ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದಾರೆ.

ಉದ್ಯಮಿಗೆ ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಚೈತ್ರಾ & ಗ್ಯಾಂಗ್ ಜೊತೆ ವಿಜಯನಗರ ಜಿಲ್ಲೆಯ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಕೂಡ ಜೈಲು ಸೇರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular