HomeKarnatakaBIG NEWS: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆ ಇರಲಿಲ್ಲ; ಇದು ವರಿಷ್ಠರ ತೀರ್ಮಾನ ಎಂದ ಮಾಜಿ...

BIG NEWS: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆ ಇರಲಿಲ್ಲ; ಇದು ವರಿಷ್ಠರ ತೀರ್ಮಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ತಮ್ಮ ಮಗ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆ ಇರಲಿಲ್ಲ. ಇದು ಪಕ್ಷದ ಹೈಕಮಾಂಡ್ ನಾಯಕರ ತೀರ್ಮಾನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನಾನು ಯಾರ ಬಳಿಯೂ ವಿಜೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ಕೇಳಿರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಅಮಿತ್ ಶಾ, ಜೆ.ಪಿ ನಡ್ಡಾ ಸೇರಿ ನಿರ್ಧಾರ ಮಾಡಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯೇಂದ್ರ ಸಮರ್ಥವಾಗಿ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ವರಿಷ್ಠರಿಗಿದೆ. ಎಲ್ಲರ ನಿರೀಕ್ಷೆಗೆ ತಕ್ಕಂತೆ ವಿಜಯೇಂದ್ರ ಕೆಲಸ ಮಾಡ್ತಾರೆ. ವೀರಶೈವ ಸಮುದಾಯ ನಮ್ಮ ಜೊತೆಗಿದೆ. ಎಲ್ಲರೂ ಸೇರಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲುತ್ತೇವೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular