ಬೆಂಗಳೂರು : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ದಿನವಾದ ನವೆಂಬರ್ 15 ರಂದು ಗೋಪೂಜೆ ಮಾಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ನವೆಂಬರ್ 14ರ ಮಂಗಳವಾರ ಎಲ್ಲಾ ದೇವಾಲಯಗಳಲ್ಲಿ ಸಂಜೆ ವಿಶೇಷವಾಗಿ ಗೋವಿನ ಪೂಜೆ ನಡೆಯಲಿದೆ. ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಅವುಗಳಿಗೆ ನೀಡಬೇಕು. ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು ಎಂದು ಮುಜರಾಯಿ ಇಲಾಖೆ ದೇವಾಲಯಗಳ ಸಿಬ್ಬಂದಿಗೆ ಸೂಚಿಸಲಾಗಿದೆ.