ಬೆಂಗಳೂರು : ಇಂದು ನಗರದ ಎಂ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಭಾರತ ಹಾಗೂ ನೆದರ್‌ಲ್ಯಾಂಡ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆ; ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್, ಕ್ಯಾಬ್ ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ಇಂದು ಕ್ರಿಕೆಟ್ ವೀಕ್ಷಣೆಗೆ ಬರುವ ಕ್ರೀಡಾಭಿಮಾನಿಗಳ ಹೆಚ್ಚಳದಿಂದ ಸಂಚಾರ ದಟ್ಟಣೆ ಉಂಟಾಗಲಿದೆ. ಸಾರ್ವಜನಿಕರು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಪ್ರಯಾಣ ಸಾಧ್ಯವಾದಷ್ಡು ಕಡಿಮೆ ಮಾಡಿದ್ರೆ ಉತ್ತಮ. ಈಗಾಗಲೇ ಅಗತ್ಯ ಬಂದೋಬಸ್ತ್ ಕಲ್ಪಿಸಿ ಯಾವುದೇ ರೀತಿಯ ಸಂಚಾರ ದಟ್ಡಣೆ ಆಗದಂತೆ ಕ್ರಮವಹಿಸಲಾಗಿದೆ ಎಂದರು.
ವಿಶ್ವಕಪ್‌ನಲ್ಲಿ ಲೀಗ್ ಹಂತದ ಮತ್ತು ಭಾರತ ತಂಡದ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಕ್ಯಾಬ್ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ವಾರಾಂತ್ಯ ಆಗಿರುವುದರಿಂದ ನಾಳೆ ಸಾರ್ವಜನಿಕರು ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಸಾಧ್ಯವಾದಷ್ಡು ಕಡಿಮೆ ಮಾಡಿದರೆ ಉತ್ತಮ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ.ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ-ಹೈಕೋರ್ಟ್ ಎದುರಿನ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರು ವಾಹನ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.