ಬೆಳಗಾವಿ : ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಖ್ಯಾತಿಯ ಅಲ್ಲಮಪ್ರಭು ಸ್ವಾಮೀಜಿ ಇಂದು ಲಿಂಗೈಕ್ಯವಾಗಿದ್ದಾರೆ.
ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲಮಪ್ರಭು ಸ್ವಾಮೀಜಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದು, ಅಪಾರ ಭಕ್ತರನ್ನು ಹೊಂದಿದ್ದಾರೆ. ಸ್ವಾಮೀಜಿ ನಿಧನಕ್ಕೆ ಮಠದ ಭಕ್ತರು ಕಂಬನಿ ಮಿಡಿದಿದ್ದಾರೆ.
ಇಂದೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ.