HomeKarnatakaವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ: ನ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ...

ವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ: ನ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ: ಬಿ.ವೈ. ವಿಜಯೇಂದ್ರ

ತುಮಕೂರು: ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾತನಾಡಿದ ಅವರು, ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನವೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಲಿದ್ದು, ನವೆಂಬರ್ 16ರಂದು ಕಾರ್ಯಕರ್ತರ ಸಭೆ ನಡೆಸುವ ನಿರ್ಣಯ ಮಾಡಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇವೆ. ಪಕ್ಷದ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರದ ವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ. ಬೇರೆ ಕಡೆ ಚುನಾವಣೆ ಇರುವುದರಿಂದ ರಾಷ್ಟ್ರೀಯ ನಾಯಕರು ಬರುತ್ತಿಲ್ಲ. ಜವಾಬ್ದಾರಿ ಸ್ವೀಕಾರದ ದಿನ ಕೇಂದ್ರದ ವೀಕ್ಷಕರು ಬರುವ ಸಾಧ್ಯತೆ ಇದೆ. ಇದಕ್ಕಿಂತ ಮೊದಲು ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ತಂದೆಯವರು ಏನೇ ಜವಾಬ್ದಾರಿ ತೆಗೆದುಕೊಳ್ಳುವಾಗ ಸಿದ್ದಗಂಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದು ಮುಂದೆ ಸಾಗುತ್ತಿದ್ದರು. ಅದೇ ರೀತಿ ಇಲ್ಲಿಗೆ ಬಂದು ಪೂಜ್ಯರ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular