ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ನೇಮಕವನ್ನು ನಾನು ಹರ್ಷದಿಂದ ಸ್ವಾಗತಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ 3 ವರ್ಷ ಮಾತ್ರ ಅಧ್ಯಕ್ಷರಾಗಿರುತ್ತಾರೆ. ಬಳಿಕ ಮತ್ತೊಬ್ಬ ಕಾರ್ಯಕರ್ತ ಅಧ್ಯಕ್ಷರಾಗುತ್ತಾರೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಂಡಿದೆ. ಯುವ ನಾಯಕತ್ವಕ್ಕೆ ಅವಕಾಶ ಕೊಡಬೇಕು ಎಂದು ಪಕ್ಷ್ ಅತೀರ್ಮಾನಿಸಿದೆ. ನಮ್ಮ ಸಹಕಾರ ವಿಜಯೇಂದ್ರಗಿದೆ ಎಂದು ಹೇಳಿದರು.
ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ವಿಜಯೇಂದ್ರ ಕೆಲಸ ಮಾಡಲಿದ್ದಾರೆ. ನಮ್ಮಲ್ಲಿ ಯಾವುದೇ ಬಣ ಇಲ್ಲ, ವಿಜಯೇಂದ್ರ 15 ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿದ್ದಾರೆ ಎಂದರು.
ಇನ್ನು ವಿಜಯೇಂದ್ರ ನೇಮಕಕ್ಕೆ ಸಿ.ಟಿ.ರವಿ, ಅರವಿಂದ್ ಬೆಲ್ಲದ್ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ನಾನು ಬೆಲ್ಲದ್ ಅವರ ಜೊತೆ ಮಾತನಾಡುತ್ತೇನೆ. ಸಣ್ಣಪುಟ್ಟ ಅಸಮಾಧಾನವಿದೆ ನಾವೆಲ್ಲರೂ ಸೇರಿ ಸರಿ ಮಾಡುತ್ತೇವೆ ಎಂದಿದ್ದಾರೆ.