ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದ್ದು, ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ತರಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಯುವನಿಧಿ ಯೋಜನೆ ಜಾರಿ ಸಂಬಂಧ ರಾಜ್ಯ ಸರ್ಕಾರವು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದೆ ಎನ್ನಲಾಗಿದ್ದು,ಡಿಪ್ಲೋಮಾ ಹಾಗೂ ಪದವೀಧರರಿಗೆ ಮಾಸಿಕ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜನವರಿ ತಿಂಗಳ ಮೊದಲ ವಾರದಲ್ಲೇ ಜಾರಿಗೆ ಬರಲಿದೆ ಎನ್ನಲಾಗಿದೆ.
ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. 2024ರ ಜನವರಿ ಮೊದಲ ವಾರವೇ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.
ಯುವ ನಿಧಿ ನಿರುದ್ಯೋಗ ಭತ್ಯೆ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು!
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
ಬ್ಯಾಂಕ ಖಾತೆಯ ವಿವರ
ಇ-ಮೇಲ್ ಐಡಿ
ಮೊಬೈಲ್ ಸಂಖ್ಯೆ
ಭಾವಚಿತ್ರ
ಪದವಿ ಹಾಗೂ ಡಿಪ್ಲಮೋ ಮುಗಿಸಿದವರ ಕೊನೆಯ ವರ್ಷದ ಅಂಕಪಟ್ಟಿ.