HomeKarnatakaBIG NEWS : ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ : 5.8...

BIG NEWS : ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ : 5.8 ಕೋಟಿ ರೂ. ಹಣ ಸಂಗ್ರಹ

ಹಾಸನ : ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, 5.8 ಕೋಟಿ ರೂ. ಹಣ ಸಂಗ್ರಹವಾಗಿದೆ.

ಇದೇ ಮೊದಲ ಬಾರಿಗೆ 5.8 ಕೋಟಿ ರೂ. ಆದಾಯ ಹರಿದು ಬಂದಿದೆ. ವಿಶೇಷ ದರ್ಶನದ 1,000 ರೂ. ಟಿಕೆಟ್ನಿಂದ 2.59 ಕೋಟಿ ರೂ., 300 ರೂ. ಟಿಕೆಟ್ನಿಂದ 2 ಕೋಟಿ ರೂ. ಹಣ ಸಂಗ್ರಹವಾಗಿದೆ. ಒಟ್ಟಾರೆ 5.8 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ನಾಳೆ ತೆರೆ ಬೀಳಲಿದೆ. ನವೆಂಬರ್ 14ರ ಮಂಗಳವಾರ ಸಾರ್ವಜನಿಕ ದರ್ಶನ ತೆರೆ ಬೀಳಲಿದೆ. ನವೆಂಬರ್ 3ರಿಂದ 11ರವರೆಗೂ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನವೆಂಬರ್ 15 ರಂದು ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುವುದು. ಅಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ..

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular