HomeKarnatakaಕಲಬುರಗಿಯಲ್ಲಿ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಕಲಬುರಗಿಯಲ್ಲಿ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವ್ಯಕ್ತಿಯೋರ್ವ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವಾಡಿ ರೈಲ್ವೆ ಜಂಕ್ಷನ್ ನಲ್ಲಿ ನಿಲ್ಲಿಸಲಾಗಿದ್ದ ರೈಲ್ವೆ ಬೋಗಿಗೆ ಸೋಲಾಪುರ ನಿವಾಸಿ 38 ವರ್ಷದ ಸಿದ್ದ ದೋಶೆಟ್ಟಿ ಎಂಬಾತ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಸಿದ್ದಪ್ಪ ವಾಡಿ ರೈಲ್ವೆಯ ಎಸ್ ಎನ್ ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದಪ್ಪ ಆತ್ಮತ್ಯೆಗೆ ಕಾರಣ ತಿಳಿದುಬಂದಿಲ್ಲ ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular