HomeKarnatakaಮೆಕ್ಕೆಜೋಳ ಬೆಳೆದ ರೈತರಿಗೆ ಗುಡ್ ನ್ಯೂಸ್

ಮೆಕ್ಕೆಜೋಳ ಬೆಳೆದ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್‍ಗೆ 2250 ರೂ. ದರದಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, ಫ್ರೂಟ್ಸ್(FRUTTS) ತಂತ್ರಾಂಶದಲ್ಲಿ ನೊಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ.

ಕ.ಹಾ.ಮ. ಶಿಕಾರಿಪುರ ಪಶು ಆಹಾರ ಘಟಕಕ್ಕೆ ಅವಶ್ಯವಿರುವ 30000 ಮೆ.ಟನ್ ಮೆಕ್ಕೆಜೋಳವನ್ನು ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಪ್ರದೇಶದ ರೈತರುಗಳಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರ್ಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಒಬ್ಬ ರೈತರಿಂದ ಗರಿಷ್ಠ 1000 ಕ್ವಿಂಟಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ರೈತರೇ ನೇರವಾಗಿ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ತಲಾ 50 ಕೆ.ಜಿ ತೂಕದಂತೆ ಉತ್ತಮ ಗುಣಮಟ್ಟದ ಗೋಣಿಚೀಲಗಳಲ್ಲಿ ಸರಬರಾಜು ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9606012571 ಮತ್ತು ಇಮೇಲ್ ವಿಳಾಸ: [email protected] ನ್ನು ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular