HomeBusinessಸಾರ್ವಜನಿಕ ಸೇವೆಯ ಖಾಸಗಿ ಬಸ್, ಟ್ಯಾಕ್ಸಿ, ಗೂಡ್ಸ್ ವಾಹನಗಳಿಗೆ ಡಿಸೆಂಬರ್ ನಿಂದ ಜಿಪಿಎಸ್, ಪ್ಯಾನಿಕ್ ಬಟನ್...

ಸಾರ್ವಜನಿಕ ಸೇವೆಯ ಖಾಸಗಿ ಬಸ್, ಟ್ಯಾಕ್ಸಿ, ಗೂಡ್ಸ್ ವಾಹನಗಳಿಗೆ ಡಿಸೆಂಬರ್ ನಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತಿದೆ. ಡಿಸೆಂಬರ್ ನಿಂದ ಈ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ.

ಯೆಲ್ಲೋ ಬೋರ್ಡ್ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳಲ್ಲಿ ಅಳವಡಿಸಲಾಗುವುದು. ಇದರಿಂದ ಸಂಭವನೀಯ ಅಪರಾಧ ನಿಯಂತ್ರಣ ಸಾಧ್ಯವಿದೆ. ಮಹಿಳೆಯರು, ಮಕ್ಕಳು, ಪ್ರಯಾಣಿಕರಿಗೆ ರಕ್ಷಣೆ ಸಿಗಲಿದೆ. ಕಳ್ಳತನದಂತಹ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಅನುಕೂಲವಾಗುತ್ತದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣ ತಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಪಿಎಸ್ ಮಾನಿಟರಿಂಗ್ ನಕ್ಷೆಯಲ್ಲಿ ವಾಹನಗಳ ನೈಜ ಸಮಯದ ಟ್ರ್ಯಾಕಿಂಗ್ ಮಾಡಲಾಗುತ್ತದೆ. ವಾಹನ ಎಲ್ಲಿದೆ, ಯಾವ ಮಾರ್ಗದಲ್ಲಿ ಸಂಚರಿಸುತ್ತದೆ ಎಂಬುದರ ಮಾಹಿತಿ ಸಿಗಲಿದೆ. ವಾಹನದಲ್ಲಿರುವ ಪ್ರಯಾಣಿಕರಿಗೆ ತುರ್ತು ಪರಿಸ್ಥಿತಿ ಎದುರಾದರೆ ಪ್ಯಾನಿಕ್ ಬಟನ್ ಒತ್ತಿದಾಗ ಕಮಾಂಡ್ ಸೆಂಟರ್ ಗೆ ಸಂದೇಶ ರವಾನೆಯಾಗಿ ತಕ್ಷಣ ಸ್ಥಳೀಯ ಪೊಲೀಸರಿಗೆ ತಿಳಿಸಿ ನೆರವಿಗೆ ಸೂಚಿಸಬಹುದು.

ಟೆಂಡರ್ ಮೂಲಕ 13 ಕಂಪನಿಗಳನ್ನು ಅಂತಿಮಗೊಳಿಸಿದ ಸಾರಿಗೆ ಇಲಾಖೆ ಈ ಕುರಿತು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತ ಕೂಡಲೇ ಯೋಜನೆ ಜಾರಿಯಾಗಿವೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular