HomeKarnatakaಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಕಿರಣ್ ಕುಮಾರ್(23) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದ ಕಿರಣ್ ಕುಮಾರ್ ನನ್ನು ಬಿಳಿಗೆರೆ ಠಾಣೆ ಪೊಲೀಸರು ಗಲಾಟೆ ಪ್ರಕರಣವೊಂದರಲ್ಲಿ ವಶಕ್ಕೆ ಪಡೆದಿದ್ದರು. ಪೊಲೀಸರಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದ ಕಿರಣ್ ಕುಮಾರ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆಗೆ ಮೊದಲು ಪೊಲೀಸರು ಕಿರುಕುಳ ನೀಡಿದ್ದಾಗಿ ವಿರಿಯೋ ಮಾಡಿ ಆರೋಪಿಸಿದ್ದು, ತೀವ್ರ ಸುಟ್ಟ ಗಾಯಗಳಾಗಿದ್ದ ಕಿರಣ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular