HomeKarnatakaBIG NEWS: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನದ ಬ್ಯಾಡ್ಜ್ ವಿತರಣೆಗೆ ನಿರ್ಧಾರ

BIG NEWS: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನದ ಬ್ಯಾಡ್ಜ್ ವಿತರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನವಿರುವ ತಲಾ ಮೂರು ಬ್ಯಾಡ್ಜ್ ಗಳನ್ನು ವಿತರಿಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ.

ಇದೇ ಮೊದಲ ಬಾರಿಗೆ ಈ ರಾಜ್ಯದ ಎಲ್ಲಾ ಶಾಸಕರಿಗೆ ಬ್ಯಾಡ್ಜ್ ಗಳನ್ನು ವಿತರಿಸಲು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತೀರ್ಮಾನ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಡಳಿತ ಹಾಗೂ ವಿಪಕ್ಷಗಳ ಪ್ರಮುಖರೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಒಬ್ಬರು ಶಾಸಕರಿಗೆ ಒಂದು ಬ್ಯಾಡ್ಜ್ ವಿದರಿಸುವ ಪ್ರಸ್ತಾವ ಇತ್ತು. ಆದರೆ, ಶಾಸಕರ ಬೇಡಿಕೆಯಂತೆ ಒಬ್ಬರಿಗೆ ತಲಾ ಮೂರು ಬ್ಯಾಡ್ಜ್ ಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಯು.ಟಿ. ಖಾದರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular