ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಫ್ರೈಜ್ ಮನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಪ್ರೋತ್ಸಾಹಧನದ ವಿವರ
ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ -20,000 ರೂಪಾಯಿ
ಪದವಿ -25,000 ರೂಪಾಯಿ
ಸ್ನಾತಕೋತ್ತರ ಪದವಿ -30,000
ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಪದವಿ-35,000 ರೂಪಾಯಿ ಪ್ರೋತ್ಸಾಹಧನ ಸಿಗಲಿದೆ.
ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24*7 ಸಹಾಯವಾಣಿ 9482300400 ಅಥವಾ X ಆಖತೆ @SWDGok ಗೆ ಸಂಪರ್ಕಿಸಬಹುದು.